Rain Alert:ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆರಡು ದಿನ ಮಳೆ ಸಾಧ್ಯತೆ

Spread the love

Rain Alert: ರಾಜ್ಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ರಾಜ್ಯದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಸಹ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದಲ್ಲಿ ಮತ್ತೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಆಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಹಾಗೂ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯುತ್ತದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರದಲ್ಲಿ ಮಳೆಯಾಗಿದೆ. ಮೈಸೂರಿನಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Reply

Scroll to Top

Discover more from nirantarasuddi

Subscribe now to keep reading and get access to the full archive.

Continue reading