Menstrual Leave: ಕಾರ್ಮಿಕರ ಕಾಯ್ದೆಯ ಅನ್ವಯದಂತೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಕೈಗಾರಿಕೆ ಮತ್ತು ಸಂಸ್ಥೆಗಳಲ್ಲಿ ರಜೆ ನೀಡಬೇಕು. ಇಂತಹ ಸಂಸ್ಥೆಗಳಲ್ಲಿ ಮಹಿಳಾ ಕಾರ್ಮಿಕರಿಗೆ ಪ್ರತಿ ತಿಂಗಳು ಋತುಚಕ್ರ ರಜೆಯನ್ನು ಉದ್ಯೋಗದಾದರೂ ಒದಗಿಸಬೇಕು.
ಕಾರ್ಖಾನೆಗಳ ಕಾಯ್ದೆ-1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961, ತೋಟ ಕಾರ್ಮಿಕ ಕಾಯ್ದೆ-1951 ಬೀಡಿ ಸಿಗಾರ್ ಕಾರ್ಮಿಕರ ಕಾಯ್ದೆ-1966 ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ-1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದೆ.
ನಿಯಮದ ಪ್ರಕಾರ, ಆಯಾ ತಿಂಗಳ ರಜೆಯನ್ನು ಆಯಾ ತಿಂಗಳೇ ಬಳಸಿಕೊಳ್ಳಬೇಕು. ಹಾಗೂ ಯಾವುದೇ ರೀತಿಯ ವೈದ್ಯಕೀಯ ಪ್ರಮಾಣ ಪತ್ರವನ್ನು ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಕೊಪ್ಪಳ ಜಿಲ್ಲೆಯ ಕಾರ್ಮಿಕ ಅಧಿಕಾರಿ ಸುಧಾ ಗರಗ ತಿಳಿಸಿದ್ದಾರೆ.
ಇದನ್ನು ಓದಿ: Weather: ಶೀತದಲೆ: 7 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್: ಕೆಲವೆಡೆ ಮಳೆ ಸಾಧ್ಯತೆ