IMD : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಕಾರಣದಿಂದಾಗಿ ಮುಂದಿನ 24 ಗಂಟೆ ಕರ್ನಾಟಕದ ಒಳ ನಾಡಿನಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ.
IMD : ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾದ ಕಾರಣ, ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಅದರ ಪ್ರಕಾರ, ಕನಿಷ್ಠ ಉಷ್ಣತೆ ಮೂರರಿಂದ ಆರು ಡಿಗ್ರಿಗಿಂತ ಕಡಿಮೆ ಇರಲಿದೆ. ಇನ್ನು ಕೆಲವು ಸ್ಥಳಗಳಲ್ಲಿ ಮಂಜು ಕವಿದ ವಾತವರಣ ಇರುತ್ತದೆ.
ಈ ವಾಯುಭಾರ ಕುಸಿತ ದುರ್ಬಲಗೊಂಡು ಶನಿವಾರ ಶ್ರೀಲಂಕಾದಿಂದ ಕರಾವಳಿಗೆ ದಾಟುವ ಸಾಧ್ಯತೆ ಇದೆ. ಹಾಗೂ ಮುಂದಿನ ಆರು ಗಂಟೆಗಳಲ್ಲಿ ವಾಯುವ್ಯ ದಿಕ್ಕಿಗೆ ಚಲಿಸುತ್ತದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಒಳಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಇದನ್ನು ಓದಿ: Odisha: ಒಡಿಶಾದಲ್ಲಿ ವಿಮಾನ ಅಪಘಾತ: ಪೈಲೆಟ್ ಸ್ಥಿತಿ ಗಂಭೀರ