KPTCL: ಕೆಪಿಟಿಸಿಲ್ ನ ತುರ್ತು ಕೆಲಸಗಳು ಮತ್ತು ಇತರ ಕಾಮಗಾರಿ ಕೆಲಸಗಳು ಇದ್ದು , ಬೆಸ್ಕಾಂ ವ್ಯಾಪ್ತಿಯ ಹಲವು ಭಾಗಗಳಲ್ಲಿ ಫೆಬ್ರವರಿ 11 ಮತ್ತು 12 ರಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರದಂದು ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.
ಈ ಕಾರಣದಿಂದಾಗಿ ಎನ್.ದೇವರಹಳ್ಳಿ, ತಳಕು, ಮೊನ್ನೆಕೋಟೆ, ದೇವರೆಡ್ಡಿಹಳ್ಳಿ, ಬೇಡರಡ್ಡಿ-ಹಳ್ಳಿ, ತಿಮ್ಮಪ್ಪಯನಹಳ್ಳಿ, ಹಿರೇಹಳ್ಳಿ ಗ್ರಾಮ ಪಂಚಾಯಿತಿ ಭಾಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ತನಕ ಪವರ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಇನ್ನು ತುಮಕೂರಿನಲ್ಲಿ ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ ಫೆಬ್ರವರಿ 12ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ 66/11 ಕೆವಿ ಅಂಕಸಂದ್ರ ಉಪಸ್ಥಾವರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇನ್ನು ಬೆಂಗಳೂರಿನ ಜಾಲಹಳ್ಳಿ ವಿಭಾಗದ 66/11 ಕೆವಿ ಎಂಇಐ ಉಪಕೇಂದ್ರದಲ್ಲಿ ತುರ್ತು ನಿರ್ವ ಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಿದೆ.

ಎಜಿಬಿಜಿ-ಲೇಔಟ್, ಭೈರವೇಶ್ವರ ಹೋಟೆಲ್, ಕಾವೇರಿ ಲೇಔಟ್, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐರ್ ಲೇಔಟ್, ಗಣೇಶ ಸಾ ಮಿಲ್, ಕೆಂಪೇಗೌಡ ನಗರ, ಬೃಂದಾವನ ಲೇಔಟ್, ಕಲ್ಯಾಣನಗರ ಬಾಗಲಗುಂಟೆ, ಸೌರ ಲೇಔಟ್, ಮೀನಾಕ್ಷಿ ಲೇಔಟ್ ಸೇರಿ ಹಲವು ಕಡೆಗಳಲ್ಲಿ ಪವರ್ ಕಟ್ ಆಗಿದೆ.
ಇದನ್ನು ಓದಿ:Positive Plants: ಮನೆ ಮತ್ತು ಮನಸ್ಸಿಗೆ ಶಾಂತಿ ನೀಡುವ ಹಸಿರು ಸಸ್ಯಗಳು ಯಾವುವು ಗೊತ್ತಾ?