West Bengal: ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ

Spread the love

West Bengal: ಪಶ್ಚಿಮ ಬಂಗಾಳದ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ.

Kolkata airport isolation bay security check after bomb threat in Indigo flight to Shillong.
Kolkata airport isolation bay security check after bomb threat in Indigo flight to Shillong.

ಪಶ್ಚಿಮ ಬಂಗಾಳದ ಕೊಲ್ಕತ್ತಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದೆ. ಈ ವಿಮಾನವು ಶಿಲಾಂಗ್ ಗೆ ಹೊರಟಿತ್ತು. ವಿಮಾನದ ಶೌಚಾಲಯದಲ್ಲಿ ಈ ಪತ್ರವು ದೊರೆತಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಿಂದ ಮೇಘಾಲಯದ ಶಿಲ್ಲಾಂಗ್‌ಗೆ ತೆರಳಬೇಕಿದ್ದ ಇಂಡಿಗೋ ವಿಮಾನ (6E-7304) ಬೆಳಿಗ್ಗೆ 9:15ಕ್ಕೆ ಹೊರಡಲು ಸಿದ್ಧವಾಗಿತ್ತು.

ಪ್ರಯಾಣಿಕರು ವಿಮಾನವನ್ನು ಹತ್ತುತ್ತಿದ್ದ ವೇಳೆ, ವಿಮಾನದ ಸಿಬ್ಬಂದಿಗೆ ಈ ಪತ್ರ ದೊರೆತಿತ್ತು. ತಕ್ಷಣವೇ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ವಿಮಾನವನ್ನು ತಪಾಸಣೆಗಾಗಿ ‘ಐಸೋಲೇಷನ್ ಬೇ’ಗೆ (Isolation Bay) ಸ್ಥಳಾಂತರಿಸಲಾಯಿತು.

ಹಾಗೂ, ತಪಾಸಣೆ ಪ್ರಕ್ರಿಯೆ ನಡೆಯುತ್ತಿದೆ ಮತ್ತು ಭದ್ರತೆಯನ್ನು ತೀವ್ರಗೊಳಿಸಲಾಗಿದೆ, ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ತೆಲಂಗಾಣದ ಹೈದರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇದೇ ರೀತಿಯ ಇ-ಮೇಲ್ ಬಂದಿದ್ದು, ಬಹ್ರೇನ್‌ನಿಂದ ಬಂದ ಗಲ್ಫ್ ಏರ್ ವಿಮಾನವು ಹೈದರಾಬಾದ್‌ನಲ್ಲಿ ಇಳಿಯುವ ಸಮಯದಲ್ಲಿ ಟರ್ಮಿನಲ್‌ಗಳಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಇಮೇಲ್‌ನಲ್ಲಿ ಎಚ್ಚರಿಸಲಾಗಿತ್ತು.

ಪರಿಶೀಲನೆ ನಡೆಸಿದಾಗ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ಇದನ್ನು ಓದಿ: AQI: ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತು ಗಾಳಿಯ ಗುಣಮಟ್ಟದಲ್ಲಿ ಕುಸಿತ

Leave a Reply

Scroll to Top

Discover more from nirantarasuddi

Subscribe now to keep reading and get access to the full archive.

Continue reading