BC Nagesh Death:ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಸಾಕ್ಷರತಾ ಸಚಿವ ಬಿ ಸಿ ನಾಗೇಶ್(67) ಕೊನೆಯುಸಿರೆಳೆದಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾದ ನಾಗೇಶ್ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

BC Nagesh Death:ಶ್ರೀಯುತರು ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ನರಳುತ್ತಿದ್ದು ಎರಡು ಬಾರಿ ಆಪರೇಷನ್ ಕೂಡ ಮಾಡಿಸಿಕೊಂಡಿದ್ದರು.
ಸದ್ಯ ಬೆಂಗಳೂರಿನಲ್ಲಿ ಮಗಳ ಮನೆಯಲ್ಲಿ ವಾಸವಿದ್ದ ಬಿ ಸಿ ನಾಗೇಶ್ ಮಂಗಳವಾರ ಆಗಸ್ಟ್ (18) ರಂದು ಕೊನೆಯುಸಿರೆಳೆದಿದ್ದಾರೆ. ಆಗಸ್ಟ್ 19 ರಂದು ಹುಟ್ಟೂರಾದ ತಿಪಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ವಿದ್ಯಾರ್ಥಿ ಜೀವನದಲ್ಲಿ ಎಬಿವಿಪಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದವರು ಬಿ ಸಿ ನಾಗೇಶ್. ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ ಮೂಲಕ ರಾಜಕೀಯವನ್ನು ಪ್ರವೇಶಿಸಿದ್ದರು.
1984 ರಲ್ಲಿ ಮೊದಲ ಬಾರಿ ಭಾರತೀಯ ಜನತಾ ಪಕ್ಷವನ್ನು ಸೇರಿದ್ದು, 2008 ಮತ್ತು 2018ರಲ್ಲಿ ತಿಪಟೂರು ಕ್ಷೇತ್ರದಿಂದ ಗೆದ್ದು ಶಾಸಕರಾಗಿರುತ್ತಾರೆ. 2021 ರಿಂದ 2023 ರ ತನಕ ಬೊಮ್ಮಾಯಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಇದನ್ನು ಓದಿ: ಗ್ಯಾಸ್ಟಿಕ್ ಸಮಸ್ಯೆಗೆ ತಟ್ ಅಂತ ಪರಿಹಾರ