Karnataka Weather:ಕರಾವಳಿ–ಮಲೆನಾಡಿನ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Spread the love

Karnataka Weather:ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಮುಂದುವರಿಯಲಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಬಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

Karnataka Weather
Karnataka Weather

Karnataka Weather: ಐದು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ: ಕರಾವಳಿ ಮತ್ತು ಮಲೆನಾಡು ಭಾಗದ ಕೆಲವು ಜಿಲ್ಲೆಗಳಲ್ಲಿ ಬಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳು:

ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಸಿಕ್ಕಿದೆ. ಗಾಳಿಯು ಗಂಟೆಗೆ ಸುಮಾರು 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಹೀಗಾಗಿ ಮೀನುಗಾರರು ಮತ್ತು ಕರಾವಳಿಯ ಜನರಿಗೆ ಎಚ್ಚರದಿಂದ ಇರುವಂತೆ ಹವಮಾನ ಇಲಾಖೆಯು ಸೂಚನೆ ಕೊಟ್ಟಿದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ:

ಈ ಎರಡು ಮಲೆನಾಡಿನ ಜಿಲ್ಲೆಗಳಲ್ಲೂ ಕೂಡ ಎಲ್ಲೋ ಅಲರ್ಟ್ ವಿಧಿಸಲಾಗಿದೆ. ಮತ್ತು ಬಾರಿ ಗಾಳಿ ಬೀಸುವ ಸಾಧ್ಯತೆ ಇದ್ದು, ಎಚ್ಚರವಹಿಸುವಂತೆ ಆದೇಶ ಬಂದಿದೆ.

ಬೆಂಗಳೂರು:

ಬೆಂಗಳೂರು ಗ್ರಾಮಾಂತರ ಮತ್ತು ನಾಗರಾಜ್ ಜಿಲ್ಲೆ ಸೇರಿದಂತೆ ದಕ್ಷಿಣದ ಒಳನಾಡಿನಲ್ಲಿ ಹಗುರವಾದ ಮಳೆ ಆಗುವ ಸಾಧ್ಯತೆ ಇದೆ. ಮತ್ತು ಇಲ್ಲಿ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡು:

ಗದಗ, ಧಾರವಾಡ, ರಾಯಚೂರು, ಬೀದರ್, ಕಲ್ಬುರ್ಗಿ ,ವಿಜಯಪುರ ಜಿಲ್ಲೆಗಳಲ್ಲಿ ಬಲವಾದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಇಲ್ಲಿಯೂ ಕೂಡ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ಇತರ ಜಿಲ್ಲೆಗಳು:

ದಕ್ಷಿಣ ಒಳನಾಡಿನ ಇನ್ನಿತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳ, ಹಾವೇರಿ ,ಬೆಳಗಾವಿ, ಯಾದಗಿರಿ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

ಈಗಾಗಲೇ ಹವಾಮಾನ ಇಲಾಖೆಯು ಗಾಳಿಯ ಕುರಿತಾಗಿ ಎಚ್ಚರಿಕೆಯನ್ನು ನೀಡಿದೆ. ಯಾವುದೇ ಸಮಯದಲ್ಲಿ ಮಳೆ ಹಾಗೂ ಗಾಳಿ ಬರುವ ಸಾಧ್ಯತೆ ಇರುವುದರಿಂದ ಜನರು ಎಚ್ಚರವಹಿಸುವುದು ಉತ್ತಮವಾಗಿದೆ. ಬಯಲಿನಂತಹ ಜಾಗಗಳಲ್ಲಿ ನೆಲೆಗಳಲ್ಲಿ ಆಶ್ರಯಿಸುವುದು ಉತ್ತಮ.

ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿಧನ

Leave a Comment

Scroll to Top

Discover more from nirantarasuddhi

Subscribe now to keep reading and get access to the full archive.

Continue reading