Chikkamagaluru BJP:ಹದಗೆಟ್ಟ ರಸ್ತೆಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ 18 ಕಿ.ಮೀ. ಪಾದಯಾತ್ರೆ ನಡೆಸಲಿದೆ.

ಮಲೆನಾಡು ಬಾಗದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಇನ್ನು ಮಳೆಗಾಲದಲ್ಲಂತೂ ಕೇಳುವುದೇ ಬೇಡ. ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಗ್ರಾಮೀಣ ವ್ಯಾಪ್ತಿಗೆ ಸಂಬಂಧಪಟ್ಟ ಹಲವು ರಸ್ತೆಗಳಲ್ಲಿ ಸಂಚರಿಸಲು ಕಷ್ಟಕರವಾಗಿದೆ.
ಈ ಸಮಸ್ಯೆಗೆ ಕುರಿತಾಗಿ ಗಮನಹರಿಸದ ಜನಪ್ರತಿನಿಧಿಗಳು ಮತ್ತು ಶಾಸಕಿ ನಯನ ಮುಟ್ಟಮ್ಮ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಇದರ ವಿರುದ್ಧ ಅಭಿಯಾನಕ್ಕೆ ಕರೆಕೊಟ್ಟಿದ್ದಾರೆ.
ರಜಾ ದಿನಗಳು ಮತ್ತು ವಾರಾಂತ್ಯದಲ್ಲಿ ಸಾವಿರಾರು ಭಕ್ತರು ಓಡಾಡುವ ರಸ್ತೆಗಳಿವು. ಹಾಗೂ ಪ್ರಮುಖ ಕ್ಷೇತ್ರಗಳಾದ ಹೊರನಾಡು ಶೃಂಗೇರಿ ರಂಭಾಪುರಿ ಮಠ ಸೇರಿದಂತೆ ಹಲವು ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಹಾಳಾಗಿ ಹೋಗಿವೆ
ಈ ನಿಟ್ಟಿನಲ್ಲಿ ಬಿಜೆಪಿಯೂ ಆಲ್ದೂರಿನಿಂದ ಚಿಕ್ಕಮಗಳೂರು ತನಕ ಸುಮಾರು 18 ಕಿಲೋಮೀಟರ್ ಪಾದಯಾತ್ರೆ ನಡೆಸಲು ಕರೆ ಕೊಟ್ಟಿದೆ.
ಹಾಗೂ ರಸ್ತೆಗಳಿಗೆ ಆಗಾಗ ತಾತ್ಕಾಲಿಕವಾಗಿ ತೇಪೆ ಹಾಕುವ ಬದಲು ಗುಣಮಟ್ಟದ ಕಾಮಗಾರಿ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಹಾಗೂ ತಕ್ಷಣವೇ ಕಾಮಗಾರಿ ಆರಂಭವಾಗದಿದ್ದರೆ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ರಸ್ತೆ ಮೂಲಸೌಕರ್ಯದ ಸಮಸ್ಯೆ ಹಲವು ಭಾಗಗಳಲ್ಲಿ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದ್ದು, ರಸ್ತೆಗಳನ್ನು ಗುಣಮಟ್ಟದೊಂದಿಗೆ ಅಭಿವೃದ್ಧಿಪಡಿಸುವ ಅಗತ್ಯವಿದೆ.
ಇದನ್ನು ಓದಿ: Mangaluru: ಮಂಗಳೂರಿನಲ್ಲಿ 44 ವಿಭಾಗಗಳ ಶ್ರೀ ಕೃಷ್ಣ ವೇಷ ಸ್ಪರ್ಧೆ; ಸೆ.4ರಂದು ಸ್ಪರ್ಧೆ