Karnataka Weather:ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕಾಗಿದೆ.

Karnataka Weather:ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಉತ್ತರ ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಬಲವಾದ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.
ವರದಿಯ ಪ್ರಕಾರ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು. ಹೀಗಾಗಿ ಸಾರ್ವಜನಿಕರು ಮತ್ತು ಪ್ರಯಾಣಿಕರು ಎಚ್ಚರ ವಹಿಸಬೇಕು.
ಕರಾವಳಿ
ದಕ್ಷಿಣ ಕನ್ನಡ ಉತ್ತರ ಕನ್ನಡ ಉಡುಪಿ ಭಾಗದಲ್ಲಿ ಸಾಧಾರಣ ಮಳೆ ಆಗಲಿದೆ. ಹಾಗೂ ಕೆಲವು ಭಾಗಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಹೀಗಾಗಿ ಸಮುದ್ರದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಮೀನುಗಾರರು ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.
ಕಳಸ: ಭದ್ರಾ ನದಿ ದಡದಲ್ಲಿ ಗೋವುಗಳ ಅವಶೇಷಗಳು ಪತ್ತೆ
ಉತ್ತರ ಕರ್ನಾಟಕ
ಕಲ್ಬುರ್ಗಿ, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಇಲ್ಲಿಯೂ ಕೂಡ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆ ಇರುತ್ತದೆ.
ಹಾಗೂ ಬೆಳಗಾವಿ, ಬೀದರ್ ,ಬಾಗಲಕೋಟೆ ,ಹಾವೇರಿ ,ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗಬಹುದು. ಹಾಗೂ ಗಾಳಿ ಬೀಸುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡು
ಬೆಂಗಳೂರು ಸೇರಿದ ಕ್ಷಣಗಳು ನಾಡಿನ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ. ಹಾಗೂ ಜಿಟಿಜಿಟಿ ಮಳೆಯಾಗುವ ಸಾಧ್ಯತೆ.
ಬೆಂಗಳೂರು ಗ್ರಾಮಾಂತರ ಮತ್ತು ನಗರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ ,ಚಿಕ್ಕಬಳ್ಳಾಪುರ, ತುಮಕೂರು ,ದಾವಣಗೆರೆ, ಚಿತ್ರದುರ್ಗ ,ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬೀಸಬಹುದು.
ಇದನ್ನು ಓದಿ: ಸೋಮನಾಥ್ ನಾಯಕ್ ಮತ್ತು ರಂಜನ್ ರಾವ್ ವಿರುದ್ಧ ವಂಚನೆ ಆರೋಪ
ಮಲೆನಾಡು
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಮಳೆಯ ಹಿನ್ನೆಲೆಯಲ್ಲಿ ಈ ಭಾಗಗಳಲ್ಲಿ ತಂಪಾದ ವಾತಾವರಣ ಕಂಡುಬರುತ್ತದೆ.
ಅಗತ್ಯವಿಲ್ಲದ ಪ್ರಯಾಣ ಹಾಗೂ ಬಲವಾದ ಗಾಳಿ ಬೀಸುವ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲುವುದು ಸೇರಿದಂತೆ ಇನ್ನಿತರ ಅಪಾಯಕಾರಿಯಾದ ಚಟುವಟಿಕೆಗಳಿಂದ ದೂರವಿರಬೇಕು.
ಮಳೆ ಮತ್ತು ಗಾಳಿಯ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.