Chikkamagaluru:ಸಾರ್ವಜನಿಕ ಕೆರೆಯ ಮಧ್ಯದಲ್ಲೇ ಗಾಂಜಾ ಬೆಳೆ;ಪೋಲಿಸ್ ದಾಳಿ

Spread the love

Chikkamagaluru : ಸಾರ್ವಜನಿಕ ಕೆರೆಯ ಮಧ್ಯಭಾಗದಲ್ಲೇ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕಣಿವೆ ದಾಸರಹಳ್ಳಿ ಗ್ರಾಮದಲ್ಲಿ ನಡೆದಿದೆ.

Cannabis plants found growing in a dried public lake in Chikkamagaluru.(Image Source: AI)
Cannabis plants found growing in a dried public lake in Chikkamagaluru.(Image Source: AI)

ಗ್ರಾಮದ ಸಾರ್ವಜನಿಕ ಕೆರೆಯ ನೀರು ಬತ್ತಿದ್ದರಿಂದ, ಕಿಡಿಗೇಡಿಗಳು ಯಾರಿಗೂ ಅನುಮಾನ ಬಾರದಂತೆ ಕೆರೆಯ ನಟ್ಟನಡುವೆಯೇ ಗಾಂಜಾ ಗಿಡಗಳನ್ನು ಬೆಳೆಸಿದ್ದರು ಎನ್ನಲಾಗಿದೆ.

ಈ ಕುರಿತು ಬಾತ್ಮಿದಾರರಿಂದ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಸಾರ್ವಜನಿಕ ಕೆರೆಯ ಮಧ್ಯಭಾಗದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಗಿಡಗಳು ಪತ್ತೆಯಾಗಿದ್ದು, ಪೊಲೀಸರು ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಕೆರೆಯ ಮಧ್ಯಭಾಗದಲ್ಲಿ ಗಾಂಜಾ ಬೆಳೆಯಲು ಮುಂದಾದವರು ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಹಾಗೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸಾರ್ವಜನಿಕ ಸ್ಥಳವನ್ನು ಬಳಸಿಕೊಂಡು ಮಾದಕ ವಸ್ತು ಬೆಳೆಸಿರುವ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನು ಓದಿ: ರಕ್ಷಣಾ ಸಚಿವಾಲಯದ ಮಹಿಳಾ ಅಧಿಕಾರಿ ನಾಜಿಯ ಸಾವು

Leave a Comment

Scroll to Top