Chikkamagaluru: ಮಲೆನಾಡಿನ ಉಳಿವಿಗಾಗಿ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಅಧಿಸೂಚನೆ ಕುರಿತು ಮಹತ್ವದ ಸಭೆ

Chikkamagaluru: ಮಲೆನಾಡಿನ ಪರಿಸರ ಸಂರಕ್ಷಣೆ ಹಾಗೂ ಸ್ಥಳೀಯರ ಹಿತಾಸಕ್ತಿಗೆ ಸಂಬಂಧಿಸಿದಂತೆ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಅಧಿಸೂಚನೆ ಕುರಿತು ಮಹತ್ವದ ಸಭೆ ಆಯೋಜಿಸಲಾಗಿದೆ.
ಆಗಸ್ಟ್ 24ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಚಿಕ್ಕಮಗಳೂರಿನ ವಿಜಯಪುರದಲ್ಲಿರುವ ಜಿಲ್ಲಾ ಒಕ್ಕಲಿಗರ ಸಭಾಭವನದಲ್ಲಿ ಸಭೆ ನಡೆಯಲಿದೆ. ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಮಲೆನಾಡಿನ ಪರಿಸರ ಹಾಗೂ ಜನಜೀವನದ ಮೇಲೆ ಪರಿಸರ ಸೂಕ್ಷ್ಮ ಪ್ರದೇಶದ ಅಧಿಸೂಚನೆಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮಲೆನಾಡಿನ ಉಳಿವು, ರೈತರ ಹಿತಾಸಕ್ತಿ ಹಾಗೂ ಸ್ಥಳೀಯರ ಸಮಸ್ಯೆಗಳ ಕುರಿತು ಮುಖಂಡರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.
ಸಭೆಯನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ರೈತ ಒಕ್ಕೂಟ, ಚಿಕ್ಕಮಗಳೂರು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘ , ಕಸ್ತೂರಿರಂಗನ್ ಹೋರಾಟ ವೇದಿಕೆ, ದಲಿತ ಸಂಘಟನೆಗಳು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದೆ.
ಮಲೆನಾಡಿನ ಉಳಿವಿಗಾಗಿ ನಡೆಯಲಿರುವ ಈ ಸಭೆಯಲ್ಲಿ ಜಿಲ್ಲೆಯ ರೈತರು, ಬೆಳೆಗಾರರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.