Karnataka Weather: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಿಗೆ ಹವಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಪೋಷಿಸಲಾಗಿದೆ.

Karnataka Weather: ಆಗಸ್ಟ್ 23ರಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಸಾಧ್ಯತೆ ಇದೆ.
6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲೂ ಮಳೆ
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.
ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.
ಈ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಮೀನುಗಾರರಿಗೆ ಮುನ್ನೆಚ್ಚರಿಕೆ
ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಭಾರಿ ಮಳೆ ಮತ್ತು ಬಲವಾದ ಗಾಳಿ ಇರುವ ಸಂದರ್ಭದಲ್ಲಿ ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸುವುದು ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಸೂಕ್ತವಾಗಿದೆ.
ಭಾರತೀಯ ಹವಾಮಾನ ಇಲಾಖೆ ಕರಾವಳಿ ಕರ್ನಾಟಕಕ್ಕೆ ಆಗಸ್ಟ್ 23 ಮತ್ತು 24ರಂದು ಭಾರಿ ಮಳೆ ಹಾಗೂ ಬಲವಾದ ಗಾಳಿಯ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಜೈನ ಕಥೆಗಳಿಗೆ ರಂಗರೂಪ