Scholarship 2026: ಕರ್ನಾಟಕದ ಹೆಣ್ಣುಮಕ್ಕಳಿಗೆ ₹30,000 ವಿದ್ಯಾರ್ಥಿವೇತನ; ಅರ್ಜಿ ಆಹ್ವಾನ

Scholarship 2026: ಕರ್ನಾಟಕದ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಹಾಗೂ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ‘ದೀಪಿಕಾ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ’ (Deepika Higher Education Scholarship 2026) ಪ್ರಕಟಿಸಲಾಗಿದೆ.
ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರತಿ ವರ್ಷ ₹30,000 ಆರ್ಥಿಕ ನೆರವು
ದೀಪಿಕಾ ಉನ್ನತ ಶಿಕ್ಷಣ ವಿದ್ಯಾರ್ಥಿವೇತನದಡಿ ಆಯ್ಕೆಯಾಗುವ ಅರ್ಹ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ₹30,000 ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ಆರ್ಥಿಕ ನೆರವು ವಿದ್ಯಾರ್ಥಿನಿಯರು ಆಯ್ಕೆ ಮಾಡಿಕೊಂಡಿರುವ ಕೋರ್ಸ್‌ನ ಸಂಪೂರ್ಣ ಅವಧಿಯವರೆಗೆ ಲಭ್ಯವಾಗಲಿದೆ.
ಹೆಣ್ಣುಮಕ್ಕಳು ಉನ್ನತ ಶಿಕ್ಷಣವನ್ನು ಮುಂದುವರಿಸಲು ಅಗತ್ಯವಾದ ಆರ್ಥಿಕ ಬೆಂಬಲ ಒದಗಿಸುವುದು ಹಾಗೂ ಶಿಕ್ಷಣದಲ್ಲಿ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ವಿದ್ಯಾರ್ಥಿವೇತನದ ಪ್ರಮುಖ ಉದ್ದೇಶವಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?
ಕರ್ನಾಟಕ ರಾಜ್ಯದ ಅರ್ಹ ಹೆಣ್ಣುಮಕ್ಕಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 10ನೇ ಮತ್ತು 12ನೇ ತರಗತಿಯನ್ನು ಸರಕಾರಿ ಸಂಸ್ಥೆಗಳಲ್ಲಿ ಪೂರ್ಣಗೊಳಿಸಿರಬೇಕು.
ಅಲ್ಲದೆ, ವಿದ್ಯಾರ್ಥಿನಿಯರು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸಾಮಾನ್ಯ ಪದವಿ (General Degree), ವೃತ್ತಿಪರ ಪದವಿ (Professional Degree), ಇತರೆ ಪದವಿ ಅಥವಾ PUC ಆಧಾರಿತ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು.
ಈ ಕೋರ್ಸ್‌ಗಳನ್ನು ಸರಕಾರಿ, ಖಾಸಗಿ ಅನುದಾನಿತ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಹರಾಗಿರಬಹುದು.
ಇದನ್ನು ಓದಿ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಲಕ್ನೋ ನಿವಾಸದ ಮೇಲೆ ಈಡಿ ದಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ದೀಪಿಕಾ ಉನ್ನತ ಶಿಕ್ಷಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿನಿಯರು ಕೊನೆಯ ದಿನಾಂಕಕ್ಕೂ ಮುನ್ನ ಅರ್ಜಿ ಸಲ್ಲಿಸುವುದು ಸೂಕ್ತ.
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿನಿಯರು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗಾಗಿ ಅಜೀಮ್ ಪ್ರೇಮ್‌ಜಿ ಫೌಂಡೇಶನ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಪ್ರಕಟಿಸಲಾಗಿರುವ ಪೋಸ್ಟರ್‌ನಲ್ಲಿರುವ QR Code ಅನ್ನು ಸ್ಕ್ಯಾನ್ ಮಾಡಿಯೂ ವಿವರಗಳನ್ನು ಪಡೆಯಬಹುದು.
ಅಧಿಕೃತ ವೆಬ್‌ಸೈಟ್: “Azim Premji Foundation” (https://reference-url-citation.invalid/0)
ಅರ್ಹ ವಿದ್ಯಾರ್ಥಿನಿಯರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ಪಡೆಯಬಹುದಾಗಿದೆ.