Chikkamagaluru:ಕಾಫಿನಾಡಿನಲ್ಲಿ ಮತ್ತೆ ನಕಲಿ ತುಪ್ಪದ ದಂಧೆ

Spread the love

Chikkamagaluru: ಕೆಮಿಕಲ್ ಬೆರೆಸಿ ‘ಅಪ್ಪಟ ನಾಟಿ ತುಪ್ಪ’ ಮಾರಾಟ; 30 ಕೆ.ಜಿ.ಗೂ ಹೆಚ್ಚು ನಕಲಿ ತುಪ್ಪ ವಶ

Food department officials seize more than 30 kg of fake ghee during a raid in Chikkamagaluru.
Food department officials seize more than 30 kg of fake ghee during a raid in Chikkamagaluru.

Chikkamagaluru: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ನಕಲಿ ನಾಟಿ ತುಪ್ಪ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆಹಾರ ಇಲಾಖೆ ಹಾಗೂ ನಗರ ಠಾಣೆ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ.

ದಾಳಿ ವೇಳೆ 30 ಕೆ.ಜಿಗಿಂತಲೂ ಅಧಿಕ ಪ್ರಮಾಣದ ನಕಲಿ ತುಪ್ಪವನ್ನು ವಶಕ್ಕೆ ಪಡೆಯಲಾಗಿದೆ.

ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆಸಲಾಗಿದೆ.

ಡಾಲ್ಡಾ ಹಾಗೂ ಕೆಮಿಕಲ್ ಬಳಕೆ

ಅಡುಗೆಗೆ ಬಳಸುವ ಡಾಲ್ಡಾ ಸೇರಿದಂತೆ ವಿವಿಧ ಪದಾರ್ಥಗಳು ಹಾಗೂ ರಾಸಾಯನಿಕಗಳನ್ನು ಮಿಶ್ರಣ ಮಾಡಿ ತುಪ್ಪವನ್ನು ತಯಾರಿಸಲಾಗುತ್ತಿತ್ತು. ಬಳಿಕ ಅದನ್ನು ಅಪ್ಪಟ ನಾಟಿ ತುಪ್ಪ ಎಂದು ಬಿಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಈ ರೀತಿಯಾಗಿ ಕಡಿಮೆ ವೆಚ್ಚದಲ್ಲಿ ತುಪ್ಪ ತಯಾರಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳದಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ, ನಕಲಿ ತುಪ್ಪದ ಮಾದರಿಗಳನ್ನು ವಶಕ್ಕೆ ಪಡೆದಿದ್ದಾರೆ.

 

ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ನಕಲಿ ತುಪ್ಪ ತಯಾರಿಕೆ ಮತ್ತು ಮಾರಾಟದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ತನಿಖೆಯು ಮುಂದುವರೆದಿದೆ.

Read this:Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ, ಬಲವಾದ ಗಾಳಿ

ಕಳೆದ ಕೆಲವು ದಿನಗಳ ಹಿಂದೆ ಪಾಳು ಬಿದ್ದ ಮನೆಯಲ್ಲಿ ನಕಲಿ ತುಪ್ಪದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದರು. ಹಾಗೂ ಅದರ ಹಿಂದೆ ಬಳ್ಳಾರಿಯ ಒಂದು ತಂಡ ಸಕ್ರಿಯವಾಗಿದ್ದು, ನಿರಂತರವಾಗಿ ತಮ್ಮ ಸ್ಥಳಗಳನ್ನು ಬದಲಾಯಿಸುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Scroll to Top