Koppa: Instagramನಲ್ಲಿ ನಂಬರ್ ವೈರಲ್;ಪೊಲೀಸ್ ಠಾಣೆಗೆ ದೂರು

Spread the love

Koppa: ಅಂಗನವಾಡಿ ಕಾರ್ಯಕರ್ತೆಗೆ Instagram ಕಿರುಕುಳ; ನಂಬರ್ ವೈರಲ್ ಮಾಡಿ ಅಶ್ಲೀಲ ಕರೆ, ಮೆಸೇಜ್!

Anganwadi worker faces Instagram harassment in Koppa.
Anganwadi worker faces Instagram harassment in Koppa.

Koppa: ಅಂಗನವಾಡಿ ಕಾರ್ಯಕರ್ತೆಯ ಬಗ್ಗೆ ಅಪರಿಚಿತ ವ್ಯಕ್ತಿಗಳು ನಿರಂತರ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಮಹಿಳೆಯೊಬ್ಬರ ಮೊಬೈಲ್ ಸಂಖ್ಯೆಯನ್ನು Instagramನಲ್ಲಿ ಹಂಚಿಕೊಂಡು, ಆಕೆಯ ತೇಜೋವಧೆ ಮಾಡಲು ಕಿಡಿಗೇಡಿಗಳು ಯತ್ನಿಸಿದ್ದಾರೆ.

ಇಲ್ಲಿ ಮಹಿಳೆಯ ಮೊಬೈಲ್ ನಂಬರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ. ಇದರಿಂದಾಗಿ ಅಪರಿಚಿತ ವ್ಯಕ್ತಿಗಳಿಂದ ಕರೆಗಳು ಬರಲಾರಂಭಿಸಿವೆ. ಜೊತೆಗೆ WhatsAppನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ದೂರಿನ ಪ್ರಕಾರ, ಕೆಲ ಅಪರಿಚಿತ ವ್ಯಕ್ತಿಗಳು ರಾತ್ರಿ ಸಮಯದಲ್ಲೂ ಮಹಿಳೆಗೆ ಕರೆ ಮಾಡುತ್ತಿದ್ದಾರೆ. ಹಿಂದಿ ಭಾಷೆಯಲ್ಲಿ ಅಸಭ್ಯವಾಗಿ ಹಾಗೂ ಲೈಂಗಿಕ ಅರ್ಥ ಬರುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಹಲವು ಮೊಬೈಲ್ ಸಂಖ್ಯೆಗಳನ್ನು ಬ್ಲಾಕ್ ಮಾಡಿದ್ದಾರೆ.

ಆದರೆ, ಒಂದು ಸಂಖ್ಯೆಯನ್ನು ಬ್ಲಾಕ್ ಮಾಡಿದ ಬಳಿಕವೂ ಬೇರೆ ಬೇರೆ ಮೊಬೈಲ್ ಸಂಖ್ಯೆಗಳಿಂದ ಕರೆಗಳು ಬರುತ್ತಿದ್ದು, ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸೈಬರ್ ಕಿರುಕುಳದಿಂದ ಆತಂಕಗೊಂಡ ಮಹಿಳೆ ಕೊಪ್ಪ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡು ಕಿರುಕುಳ ನೀಡುತ್ತಿರುವ ಈ ಘಟನೆ ಸಾರ್ವಜನಿಕ ವಲಯದಲ್ಲೂ ಆತಂಕ ಮೂಡಿಸಿದೆ.

ಮಹಿಳೆಯ ಮೊಬೈಲ್ ಸಂಖ್ಯೆಯನ್ನು Instagramನಲ್ಲಿ ಹಂಚಿಕೊಂಡವರು ಯಾರು ಹಾಗೂ ಅಪರಿಚಿತ ಕರೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಪೊಲೀಸರು ತನಿಖೆ ಮೂಲಕ ಪತ್ತೆಹಚ್ಚಬೇಕಿದೆ.

Read this:Chikkamagaluru: ಚಿಕ್ಕಮಗಳೂರು; ಸೆ.30ರೊಳಗೆ e-KYC ಮಾಡಿಸದಿದ್ದರೆ ಪಡಿತರ ಇಲ್ಲ

Leave a Comment

Scroll to Top