Chikkamagaluru: ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

Chikkamagaluru: ಟಿಪ್ಪರ್ ಲಾರಿ ಡಿಕ್ಕಿಗೆ ಬೈಕ್ ಸವಾರ ದುರ್ಮರಣ; ಹಾಫ್ ಹೆಲ್ಮೆಟ್ ಧರಿಸಿದ್ದ 55 ವರ್ಷದ ವ್ಯಕ್ತಿ

Chikkamagaluru
Chikkamagaluru

Chikkamagaluru: ಚಿಕ್ಕಮಗಳೂರು ಜಿಲ್ಲೆಯಲ್ಲಿ ಟಿಪ್ಪರ್ ಲಾರಿ ಒಂದು ಬೈಕ್‌ಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಹೊರವಲಯದ ಹಿರೇಮಗಳೂರು ಬಳಿ ಘಟನೆ ನಡೆದಿದ್ದು, ಅಪಘಾತದಲ್ಲಿ ತಾಲೂಕಿನ ಸಗಣಿಪುರ ಗ್ರಾಮದ ನಿವಾಸಿ ಪಾಂಡುರಂಗ (55) ಮೃತಪಟ್ಟಿದ್ದಾರೆ.

ಎಂದಿನಂತೆ ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಪಾಂಡುರಂಗ ಅವರು ಬೈಕ್‌ನಿಂದ ರಸ್ತೆಗೆ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಟಿಪ್ಪರ್‌ನ ಚಕ್ರ ಅವರ ತಲೆಯ ಮೇಲೆ ಹರಿದು, ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದೆ. ಅಪಘಾತದ ಪರಿಣಾಮ ಪಾಂಡುರಂಗ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ವೇಳೆ ಪಾಂಡುರಂಗ ಅವರು ಹಾಫ್ ಹೆಲ್ಮೆಟ್ ಧರಿಸಿದ್ದರು ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ಕಾರಣ ಹಾಗೂ ಟಿಪ್ಪರ್ ಲಾರಿ ಚಾಲಕನ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಮೃತದೇಹವನ್ನು ಅಗತ್ಯ ಕ್ರಮಗಳಿಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

Read this: Kukke: ಎರ್ಮಾಯಿಲ್ ಬಳಿ ಹೊತ್ತಿ ಉರಿದ KSRTC ಬಸ್;37 ಮಂದಿ ಪಾರು

Leave a Comment

Scroll to Top

Discover more from nirantarasuddhi

Subscribe now to keep reading and get access to the full archive.

Continue reading