Kukke: ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್‌ಗೆ ಬೆಂಕಿ; 37 ಪ್ರಯಾಣಿಕರು ಪಾರು

Kukke: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ಮಾರ್ಗ ಮಧ್ಯೆ ಬೆಂಕಿ ಹತ್ತಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯ ಎರ್ಮಾಯಿಲ್ ಬಳಿ ನಡೆದಿದೆ.
ಬಸ್ಸಿನಲ್ಲಿ ಒಟ್ಟಾರೆಯಾಗಿ 37 ಜನ ಪ್ರಯಾಣಿಸುತ್ತಿದ್ದರು. ಚಾಲಕನ ಸಮಯಪ್ರಜ್ಞೆಯಿಂದ ಸುರಕ್ಷಿತವಾಗಿ ಎಲ್ಲರೂ ಪಾರಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರು ಕಡೆಗೆ ಬಸ್ಸು ತೆರಳುತ್ತಿತ್ತು. ಎರ್ಮಾಯಿಲ್ ಸಮೀಪ ಬಂದಾಗ ಬಸ್‌ನಿಂದ ಹೊಗೆ ಬರುತ್ತಿರುವುದನ್ನು ಚಾಲಕ ಗಮನಿಸಿ, ಕೂಡಲೇ ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಬಸ್ಸಿನಿಂದ ಪ್ರಯಾಣಿಕರೆಲ್ಲರೂ ಕೆಳಗಿಳಿದ ಸ್ವಲ್ಪ ಸಮಯದಲ್ಲೇ ಬಸ್‌ಗೆ ಬೆಂಕಿ ತೀವ್ರವಾಗಿ ವ್ಯಾಪಿಸಿದೆ. ಇದರ ಪರಿಣಾಮವಾಗಿ ಬಸ್ಸು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಬಸ್ಸಿಗೆ ಬೆಂಕಿ ಹತ್ತಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Read this:Mudigere: ಮೂಡಿಗೆರೆಯಲ್ಲಿ ಮಹಿಳೆಯ ಚಿನ್ನದ ಸರ ಕಳವು