Chikkamagaluru: ಬೈಕ್ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕ ದಾರುಣ ಸಾವು

Chikkamagaluru: ಚಿಕ್ಕಮಗಳೂರು ನಗರದ ರಾಂಪುರದ ಶ್ರೀನಿವಾಸ ನಗರದ ಬಳಿ ವೇಗವಾಗಿ ಬಂದಂತಹ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ವೇಗವಾಗಿದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿರುವಂತದ್ದು. ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿ ಕಾರ್ಮಿಕ ಮೃತರಾಗಿದ್ದಾರೆ.
ಕುಟುಂಬಸ್ಥರು ಹಾಗೂ ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಪರಿಶೀಲನೆ ಬಳಿಕ ಬೈಕ್ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.