Bengaluru: ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ: ಬೆಂಗಳೂರಿನಲ್ಲಿ ನಾಳೆ ಅಮೋಘ ವಿಜಯೋತ್ಸವ
Bengaluru: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಳೆ ಅಮೋಘ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಂಗಳೂರಿನಲ್ಲಿರುವ ಎಲ್ಲಾ ತುಳು ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರ ವತಿಯಿಂದ ಈ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.
ತುಳು ಭಾಷೆಗೆ ದೊರೆತಿರುವ ಈ ಮಹತ್ವದ ಸ್ಥಾನಮಾನವನ್ನು ಸಂಭ್ರಮಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟೆಂಬರ್ 20ರಂದು ಬೆಳಿಗ್ಗೆ 8 ಗಂಟೆಗೆ ರಾಜಾಜಿನಗರದ ಸೋಪ್ ಫ್ಯಾಕ್ಟರಿ ಎದುರುಗಡೆಯಲ್ಲಿರುವ ರಾಣಿ ಅಬ್ಬಕ್ಕ ಪುತ್ತಳಿಯ ಆವರಣದಲ್ಲಿ ವಿಜಯೋತ್ಸವ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿವಿಧ ತುಳು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ತುಳು ಭಾಷಾಭಿಮಾನಿಗಳು ಭಾಗವಹಿಸಲಿದ್ದಾರೆ.
ತುಳು ಅಧಿಕೃತ ಭಾಷೆ ಸ್ಥಾನಮಾನ ಪಡೆದ ಸಂಭ್ರಮವನ್ನು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ.
Read this:Foods for Heart Health:ಹೃದಯದ ಆರೋಗ್ಯ ಕಾಪಾಡುವ ಆಹಾರಗಳು