Koppa:ಕುಂಚೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಚಿನ್ನ, ಬೆಳ್ಳಿ ಆಭರಣ ಕಳವು

Koppa: ಕೊಪ್ಪದ ಕುಂಚೂರು ಗ್ರಾಮದ ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಆದಿವಾಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಘಟನೆ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಕೈಗೊಂಡಿದ್ದು, ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಸೆಪ್ಟೆಂಬರ್ 23ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. 23ರ ರಾತ್ರಿ ಕೆಲವು ದುಷ್ಕರ್ಮಿಗಳು ಈ ಕೃತ್ಯವನ್ನು ಮಾಡಿರುವಂತದ್ದು.
ದೇವಾಲಯದ ಮುಂಭಾಗಿಲಿನ ಬೀಗವನ್ನು ಹಾಗೂ ಗರ್ಭಗುಡಿಯ ಬಾಗಿಲನ್ನು ಯಾವುದೋ ಆಯುಧದಿಂದ ಮುರಿದು ಗರ್ಭಗುಡಿಯೊಳಗೆ ಪ್ರವೇಶ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇನ್ನು 80 ಸಾವಿರ ಮೌಲ್ಯದ 8 ಗ್ರಾಂ ತೂಕದ ಚಿನ್ನದ ಮಾಂಗಲ್ಯದ ಹಾರ, ಹಾಗೂ ಸುಮಾರು 30 ಸಾವಿರ ಮೌಲ್ಯದ 3 ಗ್ರಾಂ ತೂಕದ ಚಿನ್ನದ ಮೂಗುತಿ, ಮತ್ತು ಶೃಂಗೇರಿ ಮಠದ ಬೆಳ್ಳಿ ಗಣಪತಿ, ಹಾಗೂ ಲಕ್ಷ್ಮಿ, ನಾಗ ವಿಗ್ರಹಗಳು ಮತ್ತು ಬೆಳ್ಳಿ ನಾಣ್ಯಗಳು ಸೇರಿದಂತೆ 50 ಸಾವಿರ ಮೌಲ್ಯದ 350 ಗ್ರಾಂ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಇನ್ನು ದೇವಸ್ಥಾನದ ಮುಂಭಾಗದ ಆವರಣದಲ್ಲಿ ಮೂರು ಕಾಣಿಕೆ ಹುಂಡಿಗಳಿದ್ದು, ಅವುಗಳ ಬೀಗಗಳನ್ನು ಸಹ ಮುರಿಯಲಾಗಿದೆ. ಸುಮಾರು 10 ಸಾವಿರ ನಗದು ಸಹ ಕಳವು ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಸೆಪ್ಟೆಂಬರ್ 24ರಂದು ಬೆಳಗ್ಗೆ ಪೂಜೆಗೆ ಅರ್ಚಕರು ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ದೇವಾಲಯದ ಸಮಿತಿಯ ಅಧ್ಯಕ್ಷರ ಮಗ ದುರ್ಗಾಚರಣ್ ಪ್ರಕರಣವನ್ನು ಹರಿಹರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ದಾವಿಸಿ, ಚಿಕ್ಕಮಗಳೂರಿನಿಂದ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಕೂಡ ಸ್ಥಳಕ್ಕೆ ಭೇಟಿ ನೀಡಿ ಸುಳಿವುಗಳನ್ನು ಸಂಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.
Read this:ಸೆ.28ರಂದು ಕಳಸದಲ್ಲಿ ಪ್ರವಾಸೋದ್ಯಮ ದಿನಾಚರಣೆ