Koppa: ಕೊಪ್ಪದಲ್ಲಿ ಕಾಡಿಗೆ ಬೇಟೆಗೆ ತೆರಳಿದ್ದ ಯುವಕ ಗುಂಡೇಟಿಗೆ ಬಲಿ

Spread the love

Koppa: ಕಾಡಿಗೆ ಬೇಟೆಗೆ ತೆರಳಿದ್ದ ಯುವಕ ಗುಂಡೇಟಿಗೆ ಬಲಿ

Koppa
Koppa

Koppa: ತನ್ನ ಸ್ನೇಹಿತರೊಂದಿಗೆ ಕಾಡಿಗೆ ಬೇಟೆಯಾಡಲು ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಮೃತಪಟ್ಟಿರುವ ಘಟನೆ ಕೊಪ್ಪ ತಾಲ್ಲೂಕಿನಲ್ಲಿ ನಡೆದಿದೆ.

ಮೃತ ಯುವಕನನ್ನು ಕೊಪ್ಪ ತಾಲ್ಲೂಕಿನ ಕಡೆಮನೆ ಗ್ರಾಮದ ನಿವಾಸಿ ಚೇತನ್ (26) ಎಂದು ಗುರುತಿಸಲಾಗಿದೆ. ಚೇತನ್ ಸೇರಿದಂತೆ ಏಳು ಮಂದಿ ಸ್ನೇಹಿತರು ಕಾಡಿಗೆ ಬೇಟೆಗೆ ತೆರಳಿದ್ದರು ಎನ್ನಲಾಗಿದೆ.

ಕತ್ತಲೆಯಲ್ಲಿ ಆಕಸ್ಮಿಕವಾಗಿ ಸಿಡಿದ ಗುಂಡು ಚೇತನ್‌ಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಬಳಿಕ ಸ್ನೇಹಿತರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಆದರೆ ದಾರಿಮಧ್ಯೆಯೇ ಚೇತನ್ ಮೃತಪಟ್ಟಿದ್ದಾರೆ.

ಆಸ್ಪತ್ರೆಗೆ ಕರೆತಂದಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಾಗೂ ಘಟನೆಯ ಭಾಗವಾದ ಇತರರು ಘಟನೆಯ ನಂತರ ಪರಾರಿಯಾಗಿದ್ದು, ಹುಡುಕಾಟ ನಡೆಯುತ್ತಿದೆ.

ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read this : SSP 2026: SSP Scholarship ಅರ್ಜಿ ಸಲ್ಲಿಕೆ ವಿಸ್ತರಣೆ; ನ.30 ಕೊನೆಯ ದಿನ

Leave a Comment

Scroll to Top

Discover more from nirantarasuddhi

Subscribe now to keep reading and get access to the full archive.

Continue reading