Koppa: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ; ಯುವತಿ ಆತ್ಮಹತ್ಯೆ

Spread the love

Koppa: ಬ್ಲ್ಯಾಕ್‌ಮೇಲ್, ಬೆದರಿಕೆಗೆ ಹೆದರಿ ಯುವತಿ ಆತ್ಮಹತ್ಯೆ

Koppa
Koppa

Koppa: ಬ್ಲ್ಯಾಕ್‌ಮೇಲ್ ಹಾಗೂ ಬೆದರಿಕೆಗೆ ಹೆದರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು, ಜಯಪುರ ಬಳಿಯ ಚೌಡಿಕಟ್ಟೆಯ ನಿವಾಸಿ ಮನೋಜ್ ಕುಮಾರ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದೇ ವೇಳೆ ಕಳಸ ತಾಲೂಕಿನ ಸುಂಕಸಾಲದ ಅರುಣ್ ಎಂಬಾತ ಯುವತಿಯ ಪರಿಚಯ ಮಾಡಿಕೊಂಡು, ಆಮಿಷವೊಡ್ಡಿ ಮೊಬೈಲ್ ನಂಬರ್ ಪಡೆದುಕೊಂಡು ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ.

ಈ ವೇಳೆ ಅರುಣ್ ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದ ಎನ್ನಲಾಗಿದೆ. ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ಚಿತ್ರೀಕರಿಸಿಕೊಂಡಿದ್ದ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಗಳ ಬ್ಲ್ಯಾಕ್‌ಮೇಲ್ ಹಾಗೂ ಬೆದರಿಕೆಗೆ ಒಳಗಾಗಿದ್ದ ಯುವತಿ ಸೆಪ್ಟೆಂಬರ್ 23ರಂದು ವಿಷ ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದಳು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅರುಣ್ ಮತ್ತು ಮನೋಜ್ ನೀಡಿದ ಲೈಂಗಿಕ ಹಾಗೂ ಮಾನಸಿಕ ಕಿರುಕುಳವೇ ತಮ್ಮ ಮಗಳ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read this:Chikkamagaluru: ಆನ್‌ಲೈನ್ ಲಾಟರಿ ಹೆಸರಲ್ಲಿ ₹4.30 ಲಕ್ಷ ಎಸ್ಕೇಪ್

Leave a Comment

Scroll to Top

Discover more from nirantarasuddhi

Subscribe now to keep reading and get access to the full archive.

Continue reading