Mudigere: ಹಸುವಿನ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ದುಷ್ಕರ್ಮಿಗಳು; ಸಾರ್ವಜನಿಕರಲ್ಲಿ ಆಕ್ರೋಶ

Mudigere: ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ಗೋ ಕಳ್ಳರ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದ್ದು, ರಾಷ್ಟ್ರೀಯ ಹೆದ್ದಾರಿ 173ರ ಬಳಿ ದುಷ್ಕರ್ಮಿಗಳು ಹಸುವಿನ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯುದ್ದಕ್ಕೂ ಎಳೆದುಕೊಂಡು ಹೋದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಘಟನೆಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಸುವನ್ನು ಎಳೆದುಕೊಂಡು ಹೋಗಿರುವುದು ಕಂಡುಬಂದಿದೆ. ಬಳಿಕ ಅಸಹಾಯಕ ಸ್ಥಿತಿಯಲ್ಲಿ ತಾಯಿ ಹಸು ತನ್ನ ಕರುಳಿನಾಳದ ಹಸುವನ್ನು ಬೆನ್ನಟ್ಟಿಕೊಂಡು ಹೋಗಿರುವ ದೃಶ್ಯ ಸ್ಥಳೀಯರನ್ನು ಭಾವುಕರನ್ನಾಗಿಸಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂಬ ಆರೋಪವೂ ಕೇಳಿಬಂದಿದ್ದು, ಜಾನುವಾರು ಮಾಲೀಕರು ಆತಂಕಕ್ಕೊಳಗಾಗಿದ್ದಾರೆ.
ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ದುಷ್ಕರ್ಮಿಗಳನ್ನು ಶೀಘ್ರವಾಗಿ ಗುರುತಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರು ಪೊಲೀಸರನ್ನು ಒತ್ತಾಯಿಸಿದ್ದಾರೆ.
Read this: Rain:ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು; 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್