Koppa: ಮಂಗನ ಕಾಯಿಲೆ ಹರಡುವ ಆತಂಕ; ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ

Spread the love

Koppa:ಮಂಗನ ಕಾಯಿಲೆ ಹರಡುವ ಆತಂಕ; ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ

Koppa
Koppa

Koppa: ಪ್ರಸ್ತುತ ವರ್ಷ ಮಳೆಗಿಂತ ಬಿಸಿಲಿನ ಪ್ರಮಾಣ ಹೆಚ್ಚಾಗಿದೆ. ಮಂಗನ ಕಾಯಿಲೆ ಹರಡುವ ಸಾಧ್ಯತೆಯೂ ಹೆಚ್ಚಾಗಿರುವುದರಿಂದ ಸಾರ್ವಜನಿಕರು  ಜಾಗರೂಕರಾಗಿರಲು ಕೊಪ್ಪ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಮಹೇಂದ್ರ ಸೂಚನೆ ನೀಡಿದ್ದಾರೆ.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್‌ನಿಂದ ಮೇ ತಿಂಗಳವರೆಗೆ ಹೆಚ್ಚಿನ ತಾಪಮಾನ ಇರುವುದರಿಂದ ವಣಗುಗಳ ಸಂಖ್ಯೆ ಹೆಚ್ಚಾಗುತ್ತದೆ.

ಇವು ಮನುಷ್ಯರನ್ನು ಕಚ್ಚುವ ವೈರಸ್ ಅನ್ನು ಹೊತ್ತೊಯ್ಯುವುದರಿಂದ ಮಂಗನ ಕಾಯಿಲೆ ಹರಡುವ ಸಾಧ್ಯತೆ ಇರುತ್ತದೆ. ಕಾಡಿನಲ್ಲಿ ಮಂಗಗಳ ಸಾವು ಈ ರೋಗದ ಮೊದಲ ಘಟ್ಟವಾಗಿರುತ್ತದೆ. ಅಂತಹ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯರು ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು ಎಂದು ತಿಳಿಸಿದ್ದಾರೆ.

ಇನ್ನೂ ಅರಣ್ಯ ಪ್ರದೇಶಗಳಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರು ಹಾಗೂ ಅರಣ್ಯವಾಸಿಗಳು ಇವುಗಳ ಕಡಿತದಿಂದ ರಕ್ಷಿಸಿಕೊಳ್ಳಲು ತಮ್ಮ ಕೈಕಾಲುಗಳಿಗೆ ಡೆಫಾ ಎಣ್ಣೆಯನ್ನು ಕಡ್ಡಾಯವಾಗಿ ಹಚ್ಚಿಕೊಳ್ಳಬೇಕು ಹಾಗೂ ಹತ್ತಿರದ ಆಸ್ಪತ್ರೆಗೆ ಹೋಗಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು ಎಂದಿದ್ದಾರೆ.

Leave a Comment

Scroll to Top

Discover more from nirantarasuddhi

Subscribe now to keep reading and get access to the full archive.

Continue reading