Weather: ರಾಜ್ಯದಲ್ಲಿ 7 ದಿನ ಮಳೆ ಮುನ್ಸೂಚನೆ; ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Spread the love

Weather: ರಾಜ್ಯದಲ್ಲಿ 7 ದಿನ ಮಳೆ ಮುನ್ಸೂಚನೆ; ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Karnataka weather forecast with orange and yellow rain alerts
Karnataka weather forecast with orange and yellow rain alerts

Weather: ಕರ್ನಾಟಕದಲ್ಲಿ ಅಕ್ಟೋಬರ್ 18ರಿಂದ ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ ಗುಡುಗು-ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಈಶಾನ್ಯ ಮುಂಗಾರು ಮಳೆಯ ಪ್ರಭಾವದಿಂದಾಗಿ ಮಳೆಯಾಗುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಯಾಗಿ ಇಲಾಖೆಯು ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.

ಅಕ್ಟೋಬರ್ 18ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 19ರಿಂದಲೂ ಮಳೆಯ ಚಟುವಟಿಕೆಗಳು ಮುಂದುವರಿಯಲಿವೆ.

ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಮಳೆಯ ಪ್ರಮಾಣ ಕ್ಷೀಣಿಸಬಹುದು.

ಇನ್ನು ಮಳೆಯ ಜೊತೆಗೆ ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ಜಾವ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ.

ಹವಾಮಾನ ಇಲಾಖೆಯು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ರಾಜ್ಯದ ಸುಮಾರು 26 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಮಂಡ್ಯ, ಹಾಸನ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ರಾಯಚೂರು, ಕೊಪ್ಪಳ ಸೇರಿದಂತೆ ಕಲ್ಯಾಣ ಕರ್ನಾಟಕದ ಇತರ ಭಾಗಗಳಲ್ಲಿ ಮಳೆಯ ಪ್ರಮಾಣ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕಡಿಮೆ ಇರಲಿದೆ.

Read this:Koppa: ಮಂಗನ ಕಾಯಿಲೆ ಹರಡುವ ಆತಂಕ; ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ

Leave a Comment

Scroll to Top

Discover more from nirantarasuddhi

Subscribe now to keep reading and get access to the full archive.

Continue reading